ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ; ಕೊಡಗು, ಸಕಲೇಶಪುರ ಆಯ್ತು, ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ – ಕಹಳೆ ನ್ಯೂಸ್
ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಚಿಕ್ಕಮಗಳೂರು: ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಕಡೆಗಳಲ್ಲಿ ಪ್ರಹಾವ ಪರಿಸ್ಥಿತಿ ತಲೆದೋರಿತ್ತು. ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಚಿಕ್ಕಮಗಳೂರಿಗೆ ನಿನ್ನೆ ತೆರಳಿದ್ದು, ಇಂದು ಜಿಲ್ಲಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಅಂಗವಾಗಿ ಮಕ್ಕಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಬಿಗಿ ಭದ್ರತೆ ನಡುವೆಯೂ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯಭೂಮಿಗೆ ಬರುವುದು ಬೇಡ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಭೇಟಿ ನಂತರ ಸಿದ್ದರಾಮಯ್ಯ ಅವರು ಶೃಂಗೇರಿ ಕ್ಷೇತ್ರಕ್ಕೆ ಹೋದರು.
ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸ್ವಾತಂತ್ರ್ಯ ದಿನಾಚರಣೆಯಂದು ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಮುಸ್ಲಿಮರಿಗೆ ಸೆಡ್ಡು ಹೊಡೆದ ಹಿಂದೂ ಸಂಘಟನೆಗಳು ಗಾಂಧಿ ಬಜಾರ್ ಬಳಿ ಜಮಾಯಿಸಿ ಪ್ರತಿಭಟನೆ ಮುಂದಾದರು. ಈ ವೇಳೆ ಪ್ರೇಮ್ ಸಿಂಗ್ ಎಂಬವರಿಗೆ ಚಾಕು ಇರಿಯಲಾಗಿತ್ತು. ಈ ಬಗ್ಗೆ ಹೇಳಿಕೆ ನೀಡುತ್ತಾ ಮುಸ್ಲಿಂ ಏರಿಯಾಗಳಲ್ಲಿ ಯಾಕೆ ಸಾವರ್ಕರ್ ಅವರ ಫೋಟೋ ಹಾಕಿದ್ದೀರಿ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಹೊರಬೀಳುತ್ತಿದ್ದಂತೆ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಗೂ ಬ್ಯಾಕ್ ಘೋಷಣೆ ಕೂಗಲಾಗುತ್ತಿದೆ.
ಹೇಳಿಕೆ ನಂತರ ಗುರುವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಇದೇ ವೇಳೆ ಭದ್ರತಾ ವಾಹನಗಳ ನಡುವೆ ಹಾಗೂ ಪೊಲೀಸರ ನಡುವೆಯೇ ಸಿದ್ದರಾಮಯ್ಯ ಅವರ ಕಾರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿ ಮೊಟ್ಟೆ ಎಸೆದಿದ್ದರು. ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದ್ದ ಸಿದ್ದರಾಮಯ್ಯ ನಿನ್ನೆಯೇ ಚಿಕ್ಕಮಗಳೂರಿಗೆ ತೆರಳಿದ್ದ