Thursday, January 23, 2025
ಆರೋಗ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಈಗ ಟೊಮೆಟೋ ವೈರಸ್ ಆರ್ಭಟ – 82 ಪ್ರಕರಣಗಳು ; ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ – ಟೊಮೆಟೋ ಜ್ವರ ಎಂದರೇನು.? ರೋಗಲಕ್ಷಣ ಹಾಗೂ ಚಿಕಿತ್ಸೆ ಹೇಗೆ.? –  ಕಹಳೆ ನ್ಯೂಸ್

ನವದೆಹಲಿ: ಕೇರಳದಲ್ಲಿ ಮೇ 6 ರಂದು ಟೊಮೆಟೋ ಜ್ವರ ಪತ್ತೆಯಾಗಿದೆ. ಭಾರತದಲ್ಲಿಯೇ ಮೊದಲ ಬಾರಿಗೆ ಈ ಜ್ವರ ಕಂಡು ಬಂದಿದ್ದು, ದೇಶದಲ್ಲಿ ಈಗ ಟೊಮೆಟೋ ವೈರಸ್ ತನ್ನ ಆರ್ಭಟ ಶುರುಮಾಡಿದೆ. ಇಲ್ಲಿಯವರೆಗೂ 82 ಪ್ರಕರಣಗಳು ದಾಖಲಾಗಿವೆ. ಇದೀಗ ದೇಶದಲ್ಲಿ ವೈದ್ಯರು ಟೊಮೆಟೋ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಧ್ಯಯನಗಳ ಪ್ರಕಾರ ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದು ಕೈ, ಕಾಲು ಮತ್ತು ಬಾಯಿ ಮೂಲಕ ಹರಡುವ ಕಾಯಿಲೆಯಾಗಿದೆ.

ಮೊದಲ ಬಾರಿಗೆ ಟೊಮೆಟೋ ಜ್ವರ 2022ರ ಮೇ 6ರಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಪತ್ತೆಯಾಯಿತು. ಟೊಮೆಟೋ ಜ್ವರ ಕೋವಿಡ್ ರೀತಿಯೇ ರೋಗಲಕ್ಷಣಗಳನ್ನು ಹೊಂದಿದೆ. ಆದರೆ ಕೋವಿಡ್-19ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ. ಟೊಮೆಟೊ ಜ್ವರವು ಮಕ್ಕಳಲ್ಲಿ ಚಿಕೂನ್‍ಗುನ್ಯಾ ಅಥವಾ ಡೆಂಗ್ಯೂ ಜ್ವರದಷ್ಟೇ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳ ಮೂಲಕ ತಿಳಿದು ಬಂದಿದೆ.

Tomato

ದೇಹದ ಹಲವು ಭಾಗಗಳಲ್ಲಿ ಉಂಟಾಗುವ ಗುಳ್ಳೆಗಳು ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುತ್ತದೆ. ಇದನ್ನು ಟೊಮೆಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕಾಲಕ್ರಮೇಣ ದೇಹದ ಮೇಲಿನ ಗುಳ್ಳೆಗಳು ಟೊಮೆಟೋ ಗಾತ್ರದಷ್ಟು ದೊಡ್ಡದಾಗುತ್ತದೆ.

ಲಕ್ಷಣಗಳೇನು?
ಟೊಮೆಟೊ ಜ್ವರ ಹೊಂದಿರುವ ಮಕ್ಕಳಲ್ಲಿ ಕಂಡುಬರುವ ಪ್ರಾಥಮಿಕ ರೋಗಲಕ್ಷಣಗಳು ಚಿಕುನ್‍ಗುನ್ಯಾದಂತೆಯೇ ಇರುತ್ತವೆ. ಇದರಲ್ಲಿ ಜ್ವರ ಹೆಚ್ಚಿರುತ್ತದೆ. ಕೀಲುಗಳಲ್ಲಿ ತೀವ್ರವಾದ ನೋವು ಬರುತ್ತದೆ. ಮೈ-ಕೈ ನೋವು, ಜ್ವರ ಮತ್ತು ಆಯಾಸದಂತಹ ಕೆಲವು ರೋಗಲಕ್ಷಣಗಳು ಕೋವಿಡ್-19 ವೈರಸ್‍ನಂತೆಯೇ ಇರುತ್ತವೆ. ಇತರ ರೋಗಲಕ್ಷಣಗಳೆಂದರೆ ಕೀಲು ಊತ, ವಾಕರಿಕೆ, ಅತಿಸಾರ, ನಿರ್ಜಲೀಕರಣ, ಕೀಲು ನೋವು ಮತ್ತು ಅಧಿಕ ಜ್ವರ. ಕೆಲವು ವೇಳೆ ರೋಗಿಗಳ ಚರ್ಮದ ಮೇಲೆ ಗುಳ್ಳೆಗಳ ಬೆಳವಣಿಗೆ ಸಹ ಕಂಡು ಬರುತ್ತದೆ.

ಚಿಕಿತ್ಸೆ
ಟೊಮೆಟೊ ಜ್ವರದ ಚಿಕಿತ್ಸೆಯು ಚಿಕೂನ್‍ಗುನ್ಯಾ, ಡೆಂಗ್ಯೂ ಮತ್ತು ಕೈ, ಕಾಲು ಮತ್ತು ಬಾಯಿ ಕಾಯಿಲೆಯ ಚಿಕಿತ್ಸೆಯಂತೆಯೇ ಇರುತ್ತದೆ. ಕಿರಿಕಿರಿ ಮತ್ತು ಗುಳ್ಳೆಗಳ ಪರಿಹಾರಕ್ಕಾಗಿ ಶುಚಿತ್ವ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು. ಸೋಂಕಿತ ಮಕ್ಕಳಿಗೆ ಹೆಚ್ಚು ಕುದಿಸಿ ಆರಿಸಿದ ನೀರನ್ನು ಕುಡಿಸುವ ಮೂಲಕ ನೀರಿನಂಶವನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಮಗುವಿನಲ್ಲಿ ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ವೈದ್ಯರನ್ನು ಸಂಪರ್ಕಿಸಬೇಕು. ಗುಳ್ಳೆಗಳು ತುರಿಸುವುದು ಅಥವಾ ಒಡೆದುಕೊಳ್ಳದಂತೆ ನೋಡಿಕೊಳ್ಳಬೇಕು. ಬಿಸಿ ನೀರಿನಲ್ಲಿಯೇ ಸ್ನಾನ ಮಾಡುವುದು, ಜ್ವರದ ದೀರ್ಘಕಾಲೀನ ಪರಿಣಾಮಗಳನ್ನು ತಪ್ಪಿಸಲು ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ.