ಬೆಂಗಳೂರಿಗೆ ಭೇಟಿ ನೀಡಿದ ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಮಿತಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ : ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರ ಉಪಸ್ಧಿತಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ –ಕಹಳೆ ನ್ಯೂಸ್
ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದು, ಸಮಿತಿಯ ಸದಸ್ಯರೊಬ್ಬರಾದ ಶಿವಮೊಗ್ಗ ಸಂಸದರಾದ ಬಿ.ವೈ ರಾಘವೇಂದ್ರರವರು ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌ0ಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ನಡೆದಿದೆ.
ಅಲ್ಲದೆ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕಿನ ಮುಖ್ಯಸ್ಥರಾದ ಕೆನರಾ ಬ್ಯಾಂಕು, ಯೂನಿಯನ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಟಾನದ ಬಗ್ಗೆ, ರಾಜ್ಯದ ವಿವಿಧ ಕೈಗಾರಿಕೋಧ್ಯಮದವರೊಂದಿಗೆ ಸಿ.ಎಸ್.ಆರ್. ಫಂಡ್ ಅನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಬಗ್ಗೆ ಸಹ ಚರ್ಚಿಸಲಾಯಿತು.
ಸಬೆಯಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ರಾವ್ ಜಾಧವ್, ಸಮಿತಿಯ ಇತರ ಸಂಸತ್ ಸದಸ್ಯರು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮ ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾ ಎಲ್ ಕೆ ಅತಿಕ್ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.