Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಕೊಲೆಯತ್ನ ಆರೋಪಿಯ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಮಂಗಳೂರು, ಆ 22 : ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ.

ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಿದಾಗ ಆರೋಪಿಯು‌ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಲು‌ ಮುಂದಾಗಿದ್ದು, ಈ‌‌ ವೇಳೆ ‌ಪೊಲೀಸರು ಆರೋಪಿಗೆ ಗುಂಡೇಟು ಹಾಕಿ ಬಂಧಿಸಿದ್ದಾರೆ ‌ಎಂದು ತಿಳಿದು‌ ಬಂದಿದೆ. ಇನ್ನು ಗುಂಡೇಟು ತಿಂದ ಆರೋಪಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿದ್ದಾರೆ.