Recent Posts

Sunday, January 19, 2025
ರಾಜಕೀಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಉಷಾ ಅಂಚನ್ ಆಯ್ಕೆ – ಕಹಳೆ ನ್ಯೂಸ್

ನೆಲ್ಯಾಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ತಾ,ಪಂ. ಉಷಾಅಂಚನ್ ರವರು ನೇಮಕಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಹಾಗೂ ರಾಷ್ಟೀಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರೂ, ವಿಧಾನಪರಿಷತ್ ನ ಮಾಜಿ ಸದಸ್ಯರೂ ಆಗಿರುವ ಎಂ.ಡಿ. ಲಕ್ಷೀನಾರಾಯಣ (ಅಣ್ಣಯ್ಯ) ರವರು ಈ ನೇಮಕ ಮಾಡಿದ್ದಾರೆ. ತಾವು ಎಂದಿನಂತೆ ಪಕ್ಷದ ಸಂಘಟನೆ, ಬಲವರ್ಧನೆ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕೆಂದು ಎಂ.ಡಿ. ಲಕ್ಷೀನಾರಾಯಣರವರು ನೇಮಕಾತಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಪ್ರಸುತ್ತ ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷರೂ ಆಗಿರುವ ಉಷಾಅಂಚನ್, ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಕ್ರಿಯಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿದ್ದಾರೆ. ಅಪಾರ ಜನಬೆಂಬಲ ಮತ್ತು ಯುವ ಮಹಿಳಾ ಪಡೆಯನ್ನು ಹೊಂದಿದ ಯುವ ನಾಯಕಿಯಾಗಿದ್ದಾರೆ. ಇವರ ಆಯ್ಕೆ ಕಾಂಗ್ರೆಸ್‌ ಪಾಳಯದಲ್ಲಿ ಸಂತಸವನ್ನುಂಟುಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು