Thursday, January 23, 2025
ಮೈಸೂರುರಾಜಕೀಯರಾಜ್ಯಸುದ್ದಿ

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಎಂಟು ದಿನಗಳ ಸಾವರ್ಕರ್ ರಥಯಾತ್ರೆಗೆ ಬಿ.ಎಸ್. ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ ಆಯೋಜಿಸಿರುವ ಎಂಟು ದಿನಗಳ ಈ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ(ಆಗಸ್ಟ್ 23) ಬೆಳಗ್ಗೆ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಸವಾಲು ಹಾಕುವುದಕ್ಕೆ ಬಿಜೆಪಿ ನಿರ್ಧರಿಸಿದೆ. ಇದರ ಜತೆಗೆ ರಾಜ್ಯಾದ್ಯಂತ ಸಾವರ್ಕರ್ ಯಾತ್ರೆ ನಡೆಸುವುದಕ್ಕೂ ಚಿಂತನೆ ನಡೆದಿದೆ ಎಂದು ವರದಿ ತಿಳಿಸಿದೆ.

ಮೈಸೂರು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿನಿಂದ ರಥಯಾತ್ರೆ ಆರಂಭಗೊಳ್ಳಲಿದೆ. ಸುಮಾರು ಎಂಟು ದಿನಗಳ ಕಾಲ ಮೈಸೂರು ಸುತ್ತಲಿನ‌ ಪ್ರದೇಶಗಳಲ್ಲಿ ಈ ಯಾತ್ರೆ ನಡೆಯಲಿದೆ.

ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಳಿಕ ಸಂಘಟನಾತ್ಮಕವಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದು, ಸಾವರ್ಕರ್ ಯಾತ್ರೆ ಆ ಪೈಕಿ ಪ್ರಮುಖವಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಮಡಿಕೇರಿ ಚಲೋ ಪಾದಯಾತ್ರೆ ನಡೆಸುತ್ತಿರುವುದರಿಂದ ಹಳೆ ಮೈಸೂರು ಭಾಗದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆ ಸಿಕ್ಕಂತಾಗಿದೆ.