Friday, January 24, 2025
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಮತ್ತು ಪೌಷ್ಟಿಕ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ದೇರಳಕಟ್ಟೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ಆ. 17ರಂದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಮತ್ತು ಪೌಷ್ಟಿಕ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞರಾದ ಡಾ. ಕೃಷ್ಣಾನಂದ ಆರೋಗ್ಯ ಸಲಹೆಗಳ ಮಾಹಿತಿ ನೀಡಿದರು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ರಾಜೇಶ್, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ದಂತ ಆರೋಗ್ಯ ಚಿಕಿತ್ಸಕರಾದ ಡಾ. ಮುಶಾಕಿರ್ ಹುಸೇನ್ ಉಪಸ್ಥಿತರಿದ್ದರು. ಈ ಸಂದರ್ಭ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರು ತಪಾಸಣೆ ನಡೆಸಿದರು. ಶಿಬಿರದಲ್ಲಿ 72 ಮಕ್ಕಳು, 20 ಹದಿಹರೆಯರು ಹಾಗೂ 22 ಗರ್ಭಿಣಿಯರು ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದುಕೊಂಡರು.