Recent Posts

Monday, January 20, 2025
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ – ಕಟೀಲು ಮೇಳಗಳಿಂದ ಕಾಲಮಿತಿ ಯಕ್ಷಗಾನ : ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ..! – ಕಹಳೆ ನ್ಯೂಸ್

ಮಂಗಳೂರು, ಆ 23 : ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯದವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು ತೀರ್ಮಾನ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ‍್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ ನೀಡುತ್ತಿದ್ದು, ರಾತ್ರಿ 8.30ಕ್ಕೆ ಪೂರ್ವರಂಗ ಆರಂಭವಾದರೆ ರಾತ್ರಿ 10.30ಕ್ಕೆ ಪ್ರಸಂಗ ಪೀಠಿಕೆ ಆರಂಭವಾಗುತ್ತದೆ ಬೆಳಗ್ಗಿನ ಜಾವ ಸುಮಾರು 5.30ಕ್ಕೆ ಯಕ್ಷಗಾನ ಮುಗಿಯುತ್ತಿತ್ತು.ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ.