ಆ. 27ರಂದು ಪುತ್ತೂರು ಬಂಟರ ಭವನದಲ್ಲಿ ದಂಬೆಕ್ಕಾನ ಸದಾಶಿವ ರೈಯವರಿಂದ ರಚಿತ “ಬಂಟ ಮದುವೆ” (ಬಂಟ ಗುರಿಕ್ಕಾರನ ಕೈಪಿಡಿ) ಬಿಡುಗಡೆ – ಕಹಳೆ ನ್ಯೂಸ್
ಪುತ್ತೂರು: ಆ. 27ರಂದು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಡಾ. ಪಿ. ಬಿ. ರೈ ಪ್ರತಿಷ್ಠಾನ, ನೂಜಿ ತರವಾಡು ಕೆಯ್ಯೂರು, ಪುತ್ತೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ದಂಬೆಕ್ಕಾನ ಸದಾಶಿವ ರೈಯವರಿಂದ ರಚಿತ “ಬಂಟ ಮದುವೆ” (ಬಂಟ ಗುರಿಕ್ಕಾರನ ಕೈಪಿಐ) ಬಿಡುಗಡೆ ಹಾಗೂ ಇವರು ಕೊಡುಗೆಯಾಗಿ ನೀಡಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ಮತ್ತು ಡಾ. ಪಿ. ಬಿ. ರೈ ಪ್ರತಿಷ್ಠಾನ ವತಿಯಿಂದ ನೀಡಲ್ಪಡುವ “ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಉದ್ಯಮಿ ಡಾ. ಬಿ. ಆರ್. ಶೆಟ್ಟಿ, ಸಿ. ಎ. ಸುಧೀರ್ ಕುಮಾರ್ ಶೆಟ್ಟಿ ಯಣ್ಮಕಜೆ, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕರಾದ ವೈ. ಭರತ್ ಶೆಟ್ಟಿ, ಕರ್ನಾಟಕ ವಿಧಾನ ಪರಿಷತ್‍ನ ಶಾಸಕರಾದ ಮಂಜುನಾಥ ಭಂಡಾರಿ, ಕರ್ನಿರೆ ವಿಶ್ವನಾಥ ಶೆಟ್ಟಿ, ದಯಾನಂದ ರೈ ಮನವಳಿಕೆಗುತ್ತು, ಶಶಿಕುಮಾರ್ ರೈ ಬಾಲ್ಗೊಟ್ಟು, ಸುಧಾಕರ ಪೂಂಜ, ವಿವೇಕ್ ಶೆಟ್ಟಿ ನಗ್ರಿಗುತ್ತು, ಹೇಮನಾಥ ಶೆಟ್ಟಿ ಕಾವು ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.