Sunday, January 19, 2025
ಕ್ರೈಮ್ರಾಜ್ಯರಾಮನಗರಸುದ್ದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಲಾರಿ – ಕ್ರೂಸರ್​ ನಡುವೆ ಭೀಕರ ಅಪಘಾತ ; 9 ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ..! – ಕಹಳೆ ನ್ಯೂಸ್

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳ್ಳಂಬೆಳಗ್ಗೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೂಲಿ ಕೆಲಸಕ್ಕೆಂದು ಕಾರ್ಮಿಕರು ಕ್ರೂಸರ್​ ವಾಹನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. 20 ಜನ ಕ್ರೂಸರ್ ವಾಹನದಲ್ಲಿದ್ರು. ಲಾರಿ ಓವರ್ ಟೇಕ್ ಮಾಡಲು ಹೋಗಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 9 ಜನ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ 4.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಅದೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.