Monday, January 20, 2025
ದಕ್ಷಿಣ ಕನ್ನಡಸುದ್ದಿ

ಸೆಪ್ಟೆಂಬರ್ 2 ಪ್ರಧಾನಿ ಮೋದಿ ಆಗಮನ ಹಿನ್ನಲೆ ಸಾಗಿದೆ ಭರದ ಸಿದ್ಧತೆ ; ಸಂಸದ ನಳಿನ್‌ ಕುಮಾರ್‌ ಕಟೀಲ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ – ಕಹಳೆ ನ್ಯೂಸ್

ಮಂಗಳೂರು, ಅ 25 : ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು ಅವರನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ಆರಂಭಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ಸೋಮವಾರ ನಡೆಸಲಾಗಿದೆ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಭದ್ರತೆ ಸೇರಿದಂತೆ ಪೂರಕ ಸಿದ್ಧತೆಗಳ ಸಭೆ ನಡೆಸತೊಡಗಿದ್ದಾರೆ.

ಸಮಾವೇಶ ನಡೆಯಲಿರುವ ಗೋಲ್ಡ್‌ಪಿಂಚ್‌ ಸಿಟಿ, ಪ್ರಧಾನಿ ವಾಸ್ತವ್ಯ ನಿಲ್ಲುವ ಸಕ್ರ್ಯೂಟ್‌ ಹೌಸ್‌ನ ಸುತ್ತಮುತ್ತ ಈಗಲೇ ಸಿದ್ಧತೆಗಳು ಆರಂಭಗೊಂಡಿದೆ.ಸೆ.2ರಂದು ಬೆಳಗ್ಗೆ ಕೊಚ್ಚಿನ್‌ ಶಿಫ್‌ಯಾರ್ಡ್‌ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ವಿಕ್ರಾಂತ್‌ ಯುದ್ಧವಾಹಕ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡುವರು. ಮಧ್ಯಾಹ್ನ ಮಂಗಳೂರಿಗೆ ಆಗಮಿಸಿ ಎನ್‌ಎಂಪಿಎ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನವಮಂಗಳೂರು ಬಂದರಿಗೆ ಭೇಟಿ ನೀಡುವ ಪ್ರಧಾನಿಯವರು ಅಲ್ಲಿ ಈಗಾಗಲೇ ಪೂರ್ಣಗೊಂಡಿರುವ ಅನಘಾ ರಿಫೈನರಿ, ಬರ್ತ್‌ ನಂ.14 ಸೇರಿದಂತೆ 6 ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅದೇ ರೀತಿ ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸಂಜೆ 4 ಗಂಟೆಗೆ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಕಾರಣ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ಭರತ್‌ ಶೆಟ್ಟಿ, ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಎನ್‌ಎಂಪಿಎ ಅಧ್ಯಕ್ಷ ಡಾ.ಎ.ವಿ.ರಮಣ, ಎಸಿ ಮದನಮೋಹನ್, ಎಂಸಿಸಿ ಆಯುಕ್ತ ಶ್ರೀಧರ್ ಮತ್ತು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರದಲ್ಲಿ ಸಾವಿರಾರು ಜನರು ಕುಳಿತುಕೊಳ್ಳಲು ಅನುಕೂಲವಾಗುವಂತೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಟಿನ್ ಶೀಟ್ ಛಾವಣಿ ಹಾಕಲು ಆಡಳಿತ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.