ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಪುತ್ತೂರು ಶ್ರೀಯುತ ಸಹಾಯಕ ಆಯುಕ್ತರಿಗೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ !– ಕಹಳೆ ನ್ಯೂಸ್
ಪುತ್ತೂರು : ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಬಹುದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ವಿಸರ್ಜನೆ ಮಾಡುವುದರ ಉತ್ತಮ ವ್ಯವಸ್ಥೆ ಇಲ್ಲದ ಕಾರಣ, ಗಣೇಶನ ಅಪಮಾನವನ್ನು ಸಹ ನೋಡಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಬದಲಿಸಿ ಶಾಸ್ತ್ರದಲ್ಲಿ ಹೇಳಿದಂತೆ ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ ಚಂದ್ರಶೇಖರ ಎಚ್ ಎಂ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಈ ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ (ಮೊಬೈಲ) ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ ಸಂಚಾಲಕರು ಶ್ರೀ. ಗೋಕುಲದಾಸ್, ಧರ್ಮಪ್ರೇಮಿಗಳಾದ ಶ್ರೀ. ಶ್ರೀಧರ ಪೂಜಾರಿ, ಶ್ರೀ. ಶರತ್ ಕೃಷ್ಣ ನಗರ, ಶ್ರೀ. ಹರಿಪ್ರಸಾದ್ ಶೆಟ್ಟಿ, ಶ್ರೀ. ಚಂದ್ರಶೇಖರ ಇವರು ಉಪಸ್ಥಿತರಿದ್ದರು.