Monday, January 20, 2025
ಸುದ್ದಿ

ಬೆಳ್ತಂಗಡಿ : ಆ.28ರಂದು ಬಂದಾರಿನ ಕುಂಟಾಲಪಲ್ಕೆ ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ 11ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ – ಕಹಳೆ ನ್ಯೂಸ್

ಬೆಳ್ತಂಗಡಿ : ಆ.28ರಂದು ಬಂದಾರು ಗ್ರಾಮದ ಕುಂಟಾಲಪಲ್ಕೆ ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲಿ ಶ್ರೀ ಸರಸ್ವತಿ ಭಜನಾ ಮಂಡಳಿ ಕುಂಟಾಲಪಲ್ಕೆ, ಶ್ರೀ ಸರಸ್ವತಿ ಹಳೆವಿದ್ಯಾರ್ಥಿ ಸಂಘ ಕುಂಟಾಲಪಲ್ಕೆ, ಪ್ರಗತಿಬಂಧು ಒಕ್ಕೂಟ ಕುಂಟಾಲಪಲ್ಕೆ ಹಾಗೂ ಸ.ಹಿ.ಪ್ರಾ. ಶಾಲೆ, ಕುಂಟಾಲಪಲ್ಕೆ (ಬಿ.) ಇವರ ಸಂಯುಕ್ತ ಆಶ್ರಯದಲ್ಲಿ 11ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಂಕನೊಟ್ಟು ನಿವೃತ್ತ ಸೈನಿಕ ಶ್ರೀ ರಮೇಶ್ ಕೆ. ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕುಂಟಾಲಪಲ್ಕೆ ಲಿಂಗಪ್ಪ ಗೌಡ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನ ಸಭಾಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಜನಾರ್ಧನ ಗೌಡ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಮೋಹನ ಗೌಡ, ಕೋಡಿಯೇಲು, ಭಾರತಿ ಕೋಡಿಯೇಲು, ಅನಿತಾ ಕುರುಡಂಗೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ರಾಜೇಶ್, ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಮತ್ತಿರರು ಭಾಗವಹಿಸಲಿದ್ದಾರೆ.
ಬಳಿಕ ಮಹಿಳೆಯರಿಗೆ, ಪುರುಷರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.