Tuesday, January 21, 2025
ಸುದ್ದಿ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪಿ- ಕಹಳೆ ನ್ಯೂಸ್

ಬೈಂದೂರು : ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಆರೋಪಿಯನ್ನು ಬೈಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ ಕೋಣನ ಮನೆ (17) ಬಂಧಿತ ಆರೋಪಿ.

ಯುವತಿಯೊಂದಿಗೆ ಪ್ರೀತಿಸುವ ನಾಟಕವಾಡಿದ ಸಚಿನ್ ಆಕೆಯೊಂದಿಗೆ ಸಲುಗೆ ಬೆಳೆಸಿ ಆಗಾಗ ಪರಸ್ಪರ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಆಗಸ್ಟ್ 18 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಅಪ್ರಾಪ್ತೆಯ ತಾಯಿ ಅಡುಗೆ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮನೆಗೆ ಬಂದAತಹ ಆರೋಪಿ ಸಚಿನ್ ಖಾರ್ವಿ ಸಂತ್ರಸ್ತೆಯನ್ನು ಅಪಹರಿಸಿಕೊಂಡು ಹೋಗಿದ್ದು, ಬಳಿಕ ಜಿರಲೆಗೆ ಹಾಕುವ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನAತರ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲು ಮಾಡಿ ಬಿಡುಗಡೆ ಆದ ಬಳಿಕ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.