
ನಾಡಿನೆಲ್ಲೆಡೆ ಗಣೇಶ ಚತುರ್ಥಿಗೆ ಭರ್ಜರಿ ಸಿದ್ದತೆಗಳು ನಡೆಯುತ್ತಿದೆ. ಅಂತೆಯೇ ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪನೆಗೆ ಸಿದ್ದತೆ ನಡೆಯುತ್ತಿದ್ದು ಇಂದು ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ ನಡೆದಿದೆ. 40ನೇ ವರುಷದ ಶ್ರೀ ಗಣೇಶ ಪ್ರತಿಷ್ಠೆಗೆ ಸಕಲ ಸಿದ್ದತೆ ನಡೆಯುತ್ತಿದ್ದು, ಕಾಲೇಜಿನ ಸುತ್ತ ಮುತ್ತ ಹಾಗೂ ಗಣೇಶ ಪ್ರತಿಷ್ಠಾಪನೆ ಮಾಡುವ ಪ್ರದೇಶಗಳಲ್ಲಿ ಸ್ವಚ್ಚತಾ ಕಾರ್ಯ ನಡೆದಿದೆ. ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗಿಯಾಗಿದ್ರು. ಇನ್ನು ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್(ರಿ) ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಗಣೇಶೋತ್ಸವ ಅತ್ಯಂತ ವಿಜೃಂಭನೆಯಿAದ ನಡೆಯಲಿದೆ.

