Saturday, January 25, 2025
ಸುದ್ದಿ

ತೆರೆಗೆ ಬರಲಿದೆ ಶಿವಣ್ಣ – ಪ್ರಭುದೇವ ಅಭಿನಯದ ಚಿತ್ರ , ಭಟ್ರ ನಿರ್ದೇಶನದಲ್ಲಿ ಭರದಿಂದ ಸಾಗಿದೆ ಚಿತ್ರೀಕರಣ – ಕಹಳೆ ನ್ಯೂಸ್

ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಹೌದು, ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಚಿತ್ರಕ್ಕೆ ಇನ್ನೂ ಯಾವುದೇ ಹೆಸರಿಟ್ಟಿಲ್ಲ.
ಶಿವಣ್ಣ – ಪ್ರಭುದೇವ- ಯೋಗರಾಜ್ ಭಟ್ ಹಾಗೂ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.