Friday, January 24, 2025
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ನಾಳೆ (ಆ.30) ಪುತ್ತೂರಿನಲ್ಲಿ ರಾಜ್ಯಪಾಲರಿಂದ ವಿವೇಕಾನಂದ ಸ್ವಾಯತ್ತ ಕಾಲೇಜು ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯತೆ, ಸಾಂಸ್ಕೃತಿಕತೆ ಮತ್ತು ಆಧ್ಯಾತ್ಮಗಳನ್ನೊಳಗೊಂಡ ಶಿಕ್ಷಣ ನೀಡಬೇಕು ಮತ್ತು ವಿದ್ಯಾರ್ಥಿಗಳನ್ನು ಸಮಾಜದ ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂಬ ಉದ್ದೇಶದಿಂದ ಪ್ರಾರಂಭವಾದ ಶಿಕ್ಷಣ ಸಂಸ್ಥೆ ವಿವೇಕಾನಂದ ಮಹಾವಿದ್ಯಾಲಯ. ಈ ವಿದ್ಯಾಲಯದ ಸ್ವಾಯತ್ತ ಕಾಲೇಜು ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನಾಕಾರರಾಗಿ ಮತ್ತು ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಇದೊಂದು ಅಪರೂಪದ ಸನ್ನಿವೇಶ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸರಕಾರ್ಯವಾಹ ಮುಕುಂದ್ ಸಿ ಆರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯದರ್ಶಿ ಡಾ.ಕೆಎಂ ಕೃಷ್ಣಭಟ್, ಸಂಚಾಲಕ ಮುರಳಿಕೃಷ್ಣ ಕೆ.ಎಸ್ ಸೇರಿದಂತೆ ಹಲವರು ಉಪಸ್ಥಿತರಿರುವರು.
ಪ್ರಸ್ತುತ ವರ್ಷ ಇಡೀ ದೇಶದಲ್ಲಿ 40 ಕಾಲೇಜುಗಳು ಸ್ವಾಯತ್ತತೆಯ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ವಿವೇಕಾನಂದ ಸಂಸ್ಥೆಯೂ ಒಂದು. ಕಳೆದ 15-20 ವರ್ಷಗಳಲ್ಲಿ ದಕ್ಷಿಣಕನ್ನಡದಲ್ಲಿ ಯಾವ ಸಂಸ್ಥೆಯೂ ಅಟೋನಾಮಸ್ ಆಗಿ ಪರಿವರ್ತನೆಗೊಂಡಿಲ್ಲ. ಈ ಹೆಗ್ಗಳಿಕೆಗೆ ವಿವೇಕಾನಂದ ಕಾಲೇಜು ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ಡೀಮ್‌ಡ್ ವಿಶ್ವವಿದ್ಯಾನಿಲಯವಾಗುವತ್ತ ಹೆಜ್ಜೆ ಹಾಕಲಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಸಂಚಾಲಕ ಮುರಳಿಕೃಷ್ಣ ಕೆ.ಎಂ, ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್, ಹೆಚ್.ಡಿ ಶ್ರೀಧರ್ ಇದ್ದರು.