Tuesday, January 21, 2025
ಸುದ್ದಿ

ಸೆ.2 ರಂದು ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಗಣೇಶೋತ್ಸವದ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ನಡೆಯಲಿರುವುದರಿಂದ ಸೆ. 2 ರಂದು ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೆ.2 ರಂದು ಮಂಗಳೂರು ಕಮೀಷನರ್‌ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹಗಳು ವಿಸರ್ಜನೆಯಾಗಲಿವೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಸ್ನಾತಕೋತ್ತರ,ಡಿಪ್ಲೋಮಾ, ಐಟಿಐ, ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ಹೋಗಬೇಕೆಂದು ಆದೇಶದಲ್ಲಿ ಹೇಳಲಾಗಿದೆ.