ಮಂಗಳೂರು : ನಾಳೆ (ಸೆ. 2) ಸುಮಾರು 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ – ಕಹಳೆ ನ್ಯೂಸ್
ಮಂಗಳೂರು: ನಾಳೆ (ಸೆ. 2) ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ ನರೇಂದ್ರಮೋದಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ . ಸುಮಾರು 3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ ಗVI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ. 677 ಕೋಟಿ) ಗಳು ಸೇರಿವೆ.
ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚರೂ. 500 ಕೋಟಿ), ಶೇಖರಣಾ ಟ್ಯಾಂಕರ್ ಗಳು ಹಾಗೂ ಖಾದ್ಯತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ ಬಿಟುಮಿನ್, ಖಾದ್ಯತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ.100ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಜೊತೆಗೆ, ಕುಲೈನಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಈಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುμï ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಉಪಸ್ಥಿತರಿರಲಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ.