ಉಡುಪಿ : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿಗೆ ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30,000 ದಂಡ ವಿಧಿಸಿದೆ.
ಅರ್ಫನ್ (27) ಬಂಧಿತ ಆರೋಪಿ.
ಆರೋಪಿ ಅರ್ಫನ್ ವಿರುದ್ದ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಹಿಂದೆ ಗಾಂಜಾ ಪ್ರಕರಣ ದಾಖಲಾಗಿದ್ದು, ಆತನಿಂದ 1 ಕೆಜಿ, 048 ಗ್ರಾಂ ತೂಕದ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು.
ಇನ್ನು ಸಪ್ಟೆಂಬರ್ 3ರಂದು ಆರೋಪಿ ಅರ್ಫನ್‌ಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 30,000 ದಂಡ ವಿಧಿಸಿದ್ದು, ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ, ಉಡುಪಿಯ ಮಾನ್ಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಧೀಶರಾದ ಶಾಂತವೀರ ಶಿವಪ್ಪರವರು ತೀರ್ಪು ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ಶಾಂತಿಬಾಯಿ ವಾದ ಮಂಡನೆಯನ್ನು ಮಾಡಿದ್ದು, ಸದ್ರಿ ಗಾಂಜಾ ಪ್ರಕರಣದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಗ್ಗೆ ಪೊಲೀಸ್ ಅಧೀಕ್ಷಕರು ಇಲಾಖೆಯ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.