Tuesday, January 21, 2025
ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಹತ್ವದ ಹೆಜ್ಜೆ, “ಅಗ್ನಿಪಥ”. ಇತಿಹಾಸ ಪುರುಷ ಕೋಟಿ-ಚೆನ್ನಯರ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಸಂಸ್ಥೆ ಉದ್ಘಾಟನೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ : ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಅಗ್ನಿಪಥಕ್ಕೆ ಪೂರಕವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಗಳನ್ನು ಆರಂಭಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರ ರಾಣಿ ಅಬ್ಬಕ್ಕಳ ಹೆಸರಿನಲ್ಲಿ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯರ ಹೆಸರಿನಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಯೋಧ ಹೆಂಜ ನಾಯ್ಕ್ ಹೆಸರನ್ನು ಈಗಾಗಲೇ ಇಲಾಖೆ ಸೇನಾ ಪೂರ್ವ ತರಬೇತಿ ಸಂಸ್ಥೆಗಳಿಗೆ ಇಡುವುದಾಗಿ ಈಗಾಗಲೇ ಪ್ರಕಟಿಸಿದೆ.

ಇಂದು ಉಡುಪಿ ನಗರದ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಹೆಸರಿನಲ್ಲಿ ಸೇನಾ ಪೂರ್ವ ತರಬೇತಿ ಸಂಸ್ಥೆಯನ್ನು ಅಧಿಕೃತವಾಗಿ ಉದ್ಘಾಟನೆ ಆಗಲಿದೆ. ಪ್ರತಿ ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ಕಠಿಣವಾದ ನಾಲ್ಕು ತಿಂಗಳ ತರಬೇತಿ ಹೊಂದಿದ ಯುವಕರು ಬಹುತೇಕ ಮಂದಿ ಆಯ್ಕೆಯಾಗುವಂತಹ ಅವಕಾಶಗಳಿವೆ ಎಂದು ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಯಲ್ಲಿ ಕಲಿಯುತ್ತಿರುವ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಎಲ್ಲಾ ಸಿದ್ದತೆಗಳು ನಡೆದು ಪ್ರಥಮ ಹಂತದಲ್ಲಿ 60 ಜನ ಈಗಾಗಲೇ ಆಯ್ಕೆಯಾಗಿದ್ದಾರೆ. ಎರಡನೇ ಹಂತದಲ್ಲಿ ಎಲ್ಲಾ 100 ಅಭ್ಯರ್ಥಿಗಳು ಆಯ್ಕೆಯಾಗುವ ಅವಕಾಶಗಳು ಹೆಚ್ಚಿವೆ. ಮಂಗಳೂರು ಮತ್ತು ಉತ್ತರ ಕನ್ನಡದಲ್ಲೂ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮಂಗಳೂರು ಜಿಲ್ಲೆಯಲ್ಲಿ ಸರಾಸರಿ ನೂರಕ್ಕೆ ನೂರು ಅಭ್ಯರ್ಥಿಗಳು ಬಂದಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರು ಅಭ್ಯರ್ಥಿಗಳಿಗೆ 700 ಕ್ಕೂ ಹೆಚ್ಚು ಅರ್ಜಿಗಳಿವೆ ಎಂದು ಇಲಾಖೆಯ ಮೂಲಕ ತಿಳಿದು ಬಂದಿದೆ.

ಒಟ್ಟಾರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕಡಲತಡಿಯ ಮೂರು ಜಿಲ್ಲೆಗಳಲ್ಲಿ ಆರಂಭಿಕ ಹಂತದಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆ ಆರಂಭವಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ 31 ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸುವುದಾಗಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈಗಾಗಲೇ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಂಸದರು, ಶಾಸಕರು, ಸಚಿವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.