Tuesday, January 21, 2025
ಸುದ್ದಿ

ಟಾಟಾ ಗ್ರೂಪ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಮೃತ್ಯು – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈ : ಟಾಟಾ ಗ್ರೂಪ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರಿಗೆ 54 ವರ್ಷ ವಯಸ್ಸಾಗಿತ್ತು. ಮಿಸ್ತ್ರಿ ಅವರು ಮಧ್ಯಾಹ್ನ 3.15ರ ಸುಮಾರಿಗೆ ಅಹಮದಾಬಾದ್ ನಿಂದ ಮುಂಬೈಗೆ ಮರ್ಸಿಡಿಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದೊಂದು ಅಪಘಾತದಂತೆ ಕಾಣುತ್ತಿದೆ ಎಂದು ಪಾಲ್ಘರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಹೇಳಿದ್ದಾರೆ.

ಕಾರು ಚಾಲಕ ಸೇರಿದಂತೆ ಇತರ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲ ವ್ಯಕ್ತಿಗಳನ್ನು ಗುಜರಾತ್ ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ವಿವರಗಳನ್ನು ಗಾಯಾಳುಗಳಿಂದ ಪಡೆಯಲಾಗುವುದು ಎಂದು ಎಸ್ಪಿ ಪಾಟೀಲ್ ಹೇಳಿದರು.

ಕಾಸಾ ಪೊಲೀಸ್ ಠಾಣೆ ವ್ಯಾಪ್ತಿಯ ಸೂರ್ಯ ನದಿ ಸೇತುವೆಯ ಚರೋಟಿ ನಾಕಾದಲ್ಲಿ ಅಪಘಾತ ಸಂಭವಿಸಿದೆ ಎಂದು ಕಾಸಾ ಪೊಲೀಸ್ ಠಾಣಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಿಸ್ತ್ರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸಾ ಗ್ರಾಮೀಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.