Monday, January 20, 2025
ಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನ ಆಚರಣೆ – ಕಹಳೆ ನ್ಯೂಸ್

ಪುತ್ತೂರು: “ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ.ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ.”ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಜೀವನದ ಪ್ರತಿಯೊಂದು ಅಂಶಗಳನ್ನು ತಿದ್ದಿ ತೀಡಿ ಮತ್ತು ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ತಿಳಿಸುತ್ತಾರೆ.ವಿದ್ಯಾರ್ಥಿಗಳ ಬದುಕು ಯಾವಾಗಲೂ ಹಸನಾಗಿರಲಿ ಎಂದು ಹಾರೈಸುವ ಅವರ ಪ್ರಯತ್ನಗಳನ್ನು ಗುರುತಿಸುವುದು ಮತ್ತು ಆಚರಿಸುವುದು ಮುಖ್ಯವಾಗಿದೆ. ಎಂದು ಹೇಳಿದರು.

ಕಾಲೇಜಿನ ಸಂಸ್ಕøತ ಭಾಷಾ ಉಪನ್ಯಾಸಕರಾದ ವಿಘ್ನೇಶ್ ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀಮತಿ ಪ್ರಭಾವತಿ ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಸೌಮ್ಯ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸುಭಾಶಿತ ಕಾರ್ಯಕ್ರಮವನ್ನು ನಿರೂಪಿಸಿದರು.