Sunday, November 24, 2024
ಸುದ್ದಿ

ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿ ಆನಂದನಿಗೆ ಜೈಲು ಶಿಕ್ಷೆ – ಕಹಳೆ ನ್ಯೂಸ್

ಪುತ್ತೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ) ಹಾಗೂ ಎಫ್.ಟಿ.ಎಸ್-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿರವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡಬಿದಿರೆಯ ಆನಂದ ಎಂಬಾತ 2021ರ ಫೆ.12ರಂದು ರಾತ್ರಿ 8.30ಕ್ಕೆ ನೆರೆಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಬಳಿಕ ಪೊಲೀಸ್ ನಿರೀಕ್ಷಕಿ ರೋಸಮ್ಮ ಅವರು ಆರೋಪಿ ಆನಂದನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆನಂದನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಪೋಕ್ಸೋ ಕಾಯ್ದೆಯ ಕಲಂ 7ರಡಿ 3 ವರ್ಷ ಸಾದಾ ಸಜೆ ಮತ್ತು 1 ಸಾವಿರ ರೂ ದಂಡ ಹಾಗೂ ಕಲಂ‌ 354ರಡಿ 1 ವರ್ಷ ಸಾದಾ ಸಜೆ ಮತ್ತು 1 ಸಾವಿರ ರೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.