Sunday, November 24, 2024
ಸುದ್ದಿ

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಬೆಂಗಳೂರಿನ ಸಾಂದೀಪನಿ ವಿದ್ಯಾ ಭವನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತರುಣ ವರ್ಗದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೈಯಕ್ತಿಕ ವಿಭಾಗದ ಯೋಗಾಸನ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ (ಪುತ್ತೂರಿನ ನೆಹರೂನಗರದ ಪಿಎಮ್‍ಜಿಎಸ್‍ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.

ರಿಧಮಿಕ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.

ಬಾಲಕಿಯರ ವಿಭಾಗದ ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಾಗರಿ ಎನ್ ರೈ (ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ), ದೀಕ್ಷಾ ಕೆ (ಪುಣಚದ ಕೃಷ್ಣಪ್ಪ ಪೂಜಾರಿ ಮತ್ತು ಮಲ್ಲಿಕಾ ದಂಪತಿ ಪುತ್ರಿ), ನಿಧಿ ಎಂ. ಎಸ್ (ಬೆಳ್ಳಿಪ್ಪಾಡಿಯ ಶ್ರೀಧರ ಮತ್ತು ಶಶಿಕಲಾ ದಂಪತಿ ಪುತ್ರಿ) ವಾಣಿಜ್ಯ ವಿಭಾಗದ ಸಿಂಚನಾ ಎ (ಕಾಣಿಯೂರಿನ ದಾಮೋದರ ಗೌಡ ಮತ್ತು ಹೇಮಲತಾ ದಂಪತಿ ಪುತ್ರಿ) ಮತ್ತು ಅನುಜ್ಞಾ ಕೆ (ದರ್ಬೆಯ ಕುಶಾಲಪ್ಪ ಗೌಡ ಮತ್ತು ಪ್ರೇಮಾ ದಂಪತಿ ಪುತ್ರಿ) ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ನವೆಂಬರ್ 30ರಂದು ಸೂರತ್‍ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವೈಯಕ್ತಿಕ ವಿಭಾಗದ ಯೋಗಾಸನ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ(ಪುತ್ತೂರಿನ ನೆಹರೂನಗರದ ಪಿಎಮ್‍ಜಿಎಸ್‍ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.