Friday, September 20, 2024
ಸುದ್ದಿ

ಬಜೆಟ್‌ನಲ್ಲಿ ಕರಾವಳಿಗೆ ಅನ್ಯಾಯ ; ಫೇಸ್‍ಬುಕ್ ಪೇಜ್‌ನಲ್ಲಿ ಸಿಎಂ ವಿರುದ್ಧ ಮತ್ತೆ ಭುಗಿಲೆದ್ದ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಜು13: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಕರಾವಳಿಯ ಜನತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕರಾವಳಿಗೆ ಅನುದಾನ ನೀಡಿಲ್ಲ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟದ ಮೂಲಕ ಗಂಭೀರ ಆರೋಪ ಮಾಡುತ್ತಿದ್ದಾರೆ. “ಕುಮಾರಸ್ವಾಮಿ ನಾಟ್ ಮೈ ಸಿಎಂ” ಎಂದು ಫೇಸ್‍ಬುಕ್ ಪೇಜ್‌ನಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಅಭಿಯಾನ ಆರಂಭಿಸಿದ್ದು, ಅನುದಾನ ನೀಡದ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೀನುಗಾರರಿಗೆ ದ್ರೋಹ ಮಾಡಿದ ಕುಮಾರಸ್ವಾಮಿ ಗೆ ಧಿಕ್ಕಾರ, ಕರಾವಳಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಕಡಲ ಮಕ್ಕಳ ಒಡಲು ಬಗೆದ ದುಷ್ಟ ಸರ್ಕಾರ ಎಂಬಿತ್ಯಾದಿ ಪ್ಲೇ ಕಾರ್ಡ್‍ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಈ ಹಿಂದೆ ಕರಾವಳಿಯಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆದಿದ್ದು, ಈಗ ಫೇಸ್‍ಬುಕ್ ಮುಖಾಂತರವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.