Monday, January 20, 2025
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮೊಂಡು ಜಿಹಾದಿಗಳ ಅಂಡ್ ಬಂದ್..! ಮಂಗಳೂರಿನಲ್ಲಿ PFI, SDPI ಕಚೇರಿ ಮೇಲೆ ಎನ್‌‌ಐಎ ದಾಳಿ ; ಜಿಹಾದಿಗಳಿಂದ ಪ್ರತಿಭಟನೆ, ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಸೆ 22 : ಪಿಎಫ್‌ಐ ನಾಯಕರಾದ ಶರೀಫ್ ಬಜ್ಪೆ, ಅಶ್ರಫ್ ಜೋಕಟ್ಟೆ,ಮೊಯಿದಿನ್ ಹಳೆಯಂಗಡಿ, ನವಾಝ್ ಕಾವೂರು ಹಾಗೂ ಖಾದರ್ ಕುಳಾಯಿ ಅವರ ಮನೆ ಮೇಲೆ ಮತ್ತು ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದು, ಬಂದರು-ನೆಲ್ಲಿಕಾಯಿ ರಸ್ತೆಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ಪ್ರತಿಭಟನಾಕಾರ ನಿರತ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಇನ್ನು ಎನ್‌ಐಎ ದಾಳಿ ‌ನಡೆದ ನೆಲ್ಲಿಕಾಯಿ ರಸ್ತೆಗೆ ‌ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ್ದಾರೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಕುರಿತು ತನಿಖೆ ಆರಂಭಿಸಿದ ಎನ್.ಐ.ಎ.ಕೇಂದ್ರ ಪೋಲೀಸ್ ತಂಡ ಅದಕ್ಕೆ ಸಂಬಂಧಿಸಿದಂತೆ ಹಾಗೂ ಇನ್ನಿತರ ಪ್ರಕರಣಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲು ರಾಜ್ಯದ ಹಲವು ಕಡೆಗೆ ಇಂದು ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದೆ