Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರ – ಮುಖ್ಯಮಂತ್ರಿಗಳನ್ನು ನಳಿನ್ ಕುಮಾರ್ ಕಟೀಲ್ ಜೊತೆ ಭೇಟಿಯಾಗಿ ಮನವಿ ಸಲ್ಲಿಸಿದ್ದ ಶಾಸಕ ಡಾ. ಭರತ್ ಶೆಟ್ಟಿ ; ತಕ್ಷಣವೇ 2ಕೋಟಿ ರೂ.ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಮಂಗಳೂರು : ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಬರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಶಾಸಕರಾದ ಡಾ. ಭರತ್ ಶೆಟ್ಟಿ ವೈ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 2 ಕೋಟಿ ರೂಪಾಯಿ ಮಂಜೂರಾತಿಗೆ ಅನುಮತಿ ನೀಡಿದರು.
ಈ ಸಂದರ್ಭ ಸಮಿತಿ ಸಂಚಾಲಕರು,ಪದಾಧಿಕಾರಿಗಳು ನಿಯೋಗದಲ್ಲಿದ್ದರು. ಸರಕಾರದಿಂದ ಅನುದಾನ ಒದಗಿಸಿದ ಮುಖ್ಯಮಂತ್ರಿಗಳಿಗೆ, ಸಂಸದರಿಗೆ ,ಶಾಸಕರಿಗೆ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಕೃತಜ್ಞತೆ ಅರ್ಪಿಸಿದ್ದಾರೆ‌.