Sunday, November 24, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಅಕ್ರಮ ಗೋಸಾಗಾಟ ಪ್ರಕರಣ ; ಬಂಧಿತ ಜಿಹಾದಿಯ ಆಸ್ತಿ ಮುಟ್ಟುಗೋಲು ಹಾಕಿ, ಸೂಕ್ತ ಕಾನೂನು ಕ್ರಮ ಜರಗುಸಿ, ಕಠಿಣ ಶಿಕ್ಷೆ ವಿಧಿಸಲು ಶಾಸಕ ಸಂಜೀವ ಮಠಂದೂರು ಇಲಾಖೆಗೆ ಖಡಕ್ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಂಧಿತ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಆತನ ಆಸ್ತಿ ಮುಟ್ಟುಗೋಲು ಹಾಕಲು ಇಲಾಖೆಗೆ ಆದೇಶ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುನೀಲ್ ಕುಮಾರ್, ಪಿಎಸ್ಐ ಶ್ರೀಕಾಂತ್ ರಾಥೋಡ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.