Thursday, January 23, 2025
ಸುದ್ದಿ

ಬಿಜೆಪಿ ಉಡುಪಿ ನಗರ ವತಿಯಿಂದ 3ನೇ ವರ್ಷದ ಶಾರದಾ ಪೂಜೆ ಸಂಪನ್ನ – ಕಹಳೆ ನ್ಯೂಸ್

ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 3ನೇ ವರ್ಷದ ಶಾರದಾ ಪೂಜೆಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.

ಕಾಟೇಶ್ ಮತ್ತು ಬಳಗದವರಿಂದ ಭಜನಾ ಸೇವೆ ನಡೆಯಿತು. ನೂರಾರು ಮಂದಿ ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು.