Recent Posts

Tuesday, January 21, 2025
ಸುದ್ದಿ

ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಪತನ: ಪೈಲಟ್ ಸಾವು – ಕಹಳೆ ನ್ಯೂಸ್

ಭಾರತೀಯ ಸೇನೆಯ Indian Army ಚೀತಾ ಹೆಲಿಕಾಪ್ಟರ್ ಇಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಪತನಗೊಂಡಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತವಾಂಗ್ ಪ್ರದೇಶದಲ್ಲಿ ದಿನನಿತ್ಯದ ವಿಹಾರ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿತು. ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ