Tuesday, January 21, 2025
ಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶ್ರಿ ಶಾರದಾ ಪೂಜೆ ಹಾಗೂ ವಾಹನ ಪೂಜೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಶಾರದಾ ಪೂಜೆ, ಆಯುಧಪೂಜೆ ಹಾಗೂ ವಾಹನಪೂಜೆ ಭಾನುವಾರ ನಡೆಯಿತು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಪುರೋಹಿತ ಜಗದೀಶ ಭಟ್ಟರ ನೇತೃತ್ವದಲ್ಲಿ ಶ್ರೀ ಶಾರದಾ ಪೂಜೆ ಸಂಪನ್ನಗೊAಡಿತು. ತದನಂತರ ಅಂಬಿಕಾ ಪರಿವಾರದ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದಬ್ದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಪ್ರಾಚಾರ್ಯೆ ಮಾಲತಿ ಡಿ, ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿ, ಬೋಧಕ ಬೋಧಕೇತರ ವೃಂದ, ವಸತಿನಿಲಯ ಪಾಲಕರು, ವಿದ್ಯಾಥಿಗಳು ಹಾಗೂ ಹೆತ್ತವರು ಹಾಜರಿದ್ದರು.