Thursday, January 23, 2025
ಸುದ್ದಿ

ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಗಳಿಗೆ ಮೊಟಕಿಲ್ಲ: ರಾಜೀವ್‌ ಕುಲಾಲ್ – ಕಹಳೆ ನ್ಯೂಸ್

ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಚೆಕ್ ಗೆ‌ ಸಹಿ, ಇನ್ನಿತರ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆಂಬ ಆತಂಕ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಲ್ಲಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಷಯವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಜಿಲ್ಲೆಯ ಶಾಸಕರುಗಳು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಮತ್ತು ರಾಜ್ಯ ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರು, ಸಹ ಸಂಚಾಲಕರ ಗಮನಕ್ಕೆ ತರಲಾಯಿತು. ಇದರ ಕುರಿತಾಗಿ ನಿನ್ನೆ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸದೇ ಇನ್ನೂ ಹೆಚ್ಚಿನ ಬಲವನ್ನು ಈ ಸರ್ಕಾರ ನೀಡುವುದಾಗಿ ಸಚಿವರು ಸ್ಪಷ್ಟ ಪಡಿಸಿದ್ದಾರೆ.