ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಸದಾಶಿವ ನಗರದಲ್ಲಿ ನಡೆಯುತ್ತಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಸದಾಶಿವ ನಗರದಲ್ಲಿ ನಡೆಯುತ್ತಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪ್ರೇಮಾನಂದ ಶೆಟ್ಟಿ ಅವರು ಮೇಯರ್ ಆಗಿದ್ದ ಸಂದರ್ಭದಲ್ಲಿ ಸ್ಥಳೀಯರು ಹಾಗೂ ನಮ್ಮ ಕಾರ್ಯಕರ್ತರು ನನ್ನಲ್ಲಿ ಮಾಡಿದ್ದ ಮನವಿಯಂತೆ ಸದಾಶಿವನಗರದ ಪಾರ್ಕ್ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ಈ ಭಾಗದ ಸಾರ್ವಜನಿಕರ ಅಪೇಕ್ಷೆಯಂತೆ ಸುಂದರ ಪಾರ್ಕ್ ನಿರ್ಮಾಣ ಕಾಮಗಾರಿ ನಡೆಯುತಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನಗರದ ಆಯ್ದ ಭಾಗಗಳಲ್ಲಿ ಪಾರ್ಕ್ ನವೀಕರಣ, ಹೊಸ ಪಾರ್ಕ್ ನಿರ್ಮಾಣ ಸೇರಿದಂತೆ ಉದ್ಯಾನವನಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ದೃಷ್ಟಿಯಿಂದ ಯೋಜನೆ ರೂಪಿಸಲಾಗಿದೆ. 40ಕ್ಕೂ ಅಧಿಕ ಹಳೆಯ ಪಾರ್ಕ್ ಗಳ ನವೀಕರಣಕ್ಕೆ ಇಲಾಖೆಗಳಿಂದ ಅನುದಾನ ಬಿಡುಗಡೆಗೊಳಿಸಿದ್ದು, ಕುದ್ಮುಲ್ ರಂಗರಾವ್ ಪುರಭವನ ಮುಂಭಾಗದ ಉದ್ಯಾನವನ, ಕದ್ರಿ ಉದ್ಯಾನವನವನ್ನು ಸುಂದರವಾಗಿ ಅಭಿವೃದ್ಧಿಪಡಿಸಲಾಗಿದೆ. ನಗರದಲ್ಲಿ ವಿವಿಧ ಕಡೆಗಳಲ್ಲಿ ಪಾರ್ಕ್ ಅಭಿವೃದ್ಧಿಗೆ ವಿಶೇಷವಾಗಿ ಚಿಂತನೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ವೀಣಾ ಮಂಗಳ, ಶೋಭಾ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಜಾರಪ್ಪ ವಸಂತ್ ಪೂಜಾರಿ, ಚೇತನ್ ನಕ್ಕೆರಮಾರ್, ರಘುನಾಥ್ ಶೆಟ್ಟಿ, ಚಂದ್ರಶೇಖರ, ವಿಶಾಲಾಕ್ಷಿ ನಾಯಕ್, ಮೋಹನ್ ರಾವ್, ಚಂದ್ರಶೇಖರ್, ಮುತ್ತಣ್ಣ, ಭಾರ್ಗವ ಬಲ್ಯಾಯ, ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.