ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
“ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ತಂಡದಿಂದ ಚಿಕಿತ್ಸೆ ಮುಂದುವರಿಯುತ್ತಿದೆ” ಎಂದು ಡಾ. ಸಂಜೀವ್ ಗುಪ್ತಾ ಭಾನುವಾರ ಹೇಳಿಕೆ ನೀಡಿದ್ದರು.
ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಅವರ ತಂದೆ ಮುಲಾಯಂ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.