Saturday, January 25, 2025
ಸುದ್ದಿ

ಹಿಜಾಬ್ ವಿವಾದ: ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನ ತೀರ್ಪು-CJI ಪೀಠಕ್ಕೆ ವರ್ಗಾವಣೆ -ಕಹಳೆ ನ್ಯೂಸ್

ನವದೆಹಲಿ : ದೇಶಾದ್ಯಂತ ಗಮನ ಸೆಳೆದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ವಿಚಾರನೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಚ್ಚರಿಯೆಂದರೆ ಹಿಜಾಬ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೆರನಾದ ಅಭಿಪ್ರಾಯವಾಗಿದೆ. ನ್ಯಾ. ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್ ತೀರ್ಪು ರದ್ದು ಮಾಡಿದ್ದಾರೆ.

ಪೀಠದ ನೇತೃತ್ವ ವಹಿಸಿದ್ದ ನ್ಯಾ. ಗುಪ್ತಾ ಅವರು ಅಕ್ಟೋಬರ್ 16 ರಂದು ಸ್ಥಾನದಿಂದ ನಿವೃತ್ತರಾಗಲಿರುವ ಕಾರಣ ಇಂದು ಹಿಜಾಬ್ ಬಗ್ಗೆ ಮತ್ತೆ ಚರ್ಚೆಯಾಗಿದೆ.

ನ್ಯಾ. ಹೇಮಂತ್ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾ ಮಾಡಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದರು.

ಈ ಪ್ರಕರಣದಲ್ಲಿ ಸುಮಾರು 10 ದಿನಗಳ ಕಾಲ ವಾದಗಳು ನಡೆದಿದ್ದು ತೀರ್ಪನ್ನು ಮಾತ್ರ ಸುಪ್ರೀಂ ಕಾಯ್ದಿರಿಸಿತ್ತು.

ಸೆಪ್ಟೆಂಬರ್ 22 ರಂದು ಪ್ರಕರಣದ ಕೊನೆಯ ದಿನದ ವಿಚಾರಣೆ ನಡೆದು, ವಾದ – ಪ್ರತಿವಾದ ಪೂರ್ಣಗೊಂಡ ಬಳಿಕ ದ್ವಿಸದಸ್ಯ ಪೀಠ ತನ್ನ ತೀರ್ಪು ಕಾಯ್ದಿರಿಸಿತ್ತು.

ಹೈಕೋರ್ಟ್ ನೀಡಿದ್ದ ತೀರ್ಪು ಸದ್ಯ ಜಾರಿಯಲ್ಲಿ ಇರುತ್ತದೆ.