Recent Posts

Monday, January 27, 2025
ಸುದ್ದಿ

ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸಿದ ಕಬಕದ ಉಮ್ಮರ್ ಫಾರೂಖ್ : ಪುತ್ತೂರು ಪೊಲೀಸ್ ಉಪನಿರೀಕ್ಷಕರಾದ ಶ್ರೀಕಾಂತ್ ರಾಥೋಡ್ ತಂಡದಿAದ ಬಂಧನ –ಕಹಳೆ ನ್ಯೂಸ್

ಗಾಂಜಾ ಸೇವನೆ ಮಾಡಿ, ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸ್ತಾ ಇದ್ದ ವ್ಯಕ್ತಿಯನ್ನ ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿನ ಕಬಕ ಗ್ರಾಮದ ಕಲ್ಲಂದಡ್ಕ ಮನೆ ನಿವಾಸಿ ೩೬ ವರ್ಷ ವಯಸ್ಸಿನ ಉಮ್ಮರ್ ಫಾರೂಖ್ ಪೊಲೀಸರ ವಶದಲ್ಲಿರುವ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಪುತ್ತೂರು ನಗರ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಶ್ರೀಕಾಂತ್ ರಾಥೋಡ್ ಅವರು ಸಿಬ್ಬಂದಿಗಳಾದ ವಸಂತ ಗೌಡ,ಜಗದೀಶ, ಸ್ಕರಿಯಾ ಹಾಗೂ ಪಿಸಿ ಕಿರಣ್ ಕುಮಾರ್‌ರವರೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ತಿರುಗ್ತಾ ಇದ್ದರು. ಈ ಸಮಯ ಪುತ್ತೂರು ತಾಲೂಕು ಕಬಕ ಗ್ರಾಮದ ಪೋಳ್ಯದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತ, ಸಾರ್ವಜನಿಕರೊಂದಿಗೆ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಬಂದ ತಕ್ಷಣ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ನಿಲ್ದಾಣಕ್ಕೆ ತೆರಳಿದ ಪೊಲೀಸರು ಈತನನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಈತ ಗಾಂಜಾ ಸೇವನೆ ಮಾಡಿರುವ ಬಗ್ಗೆ ಸಂಶಯಗೊAಡ ಪೊಲೀಸರು ಮಂಗಳೂರಿಗೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದ್ದಾರೆ. ಈ ವೇಲೆ ಈತ ಗಾಂಜಾ ಸೇವನೆ ಮಾಡಿರೋದು ಧೃಢವಾಗಿದೆ. ಈತನನ್ನ ಪೊಲೀಸರು ಬಂಧಿಸಿದ್ದಾರೆ.