Tuesday, January 28, 2025
ಸುದ್ದಿ

ಒಳನಾಡು ಮೀನು ಉತ್ಪಾದಕರ ಸಮಾವೇಶ 2022 : ಅಕ್ಟೋಬರ್ 16ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಕಾರ್ಯಕ್ರಮ : ಸಮಾವೇಶ ಉದ್ಘಾಟಿಸಲಿದ್ದಾರೆ ಸಿಎಂ ಬಸವರಾಜ್ ಬೊಮ್ಮಾಯಿ -ಕಹಳೆ ನ್ಯೂಸ್

75ನೇ ಸ್ವಾತಂತ್ರ್ಯದ ಅಮೇಋತ ಮಹೋತ್ಸವದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಮೀನುಗಾರಿಕೆ ಇಲಾಖೆ ವತಿಯಿಮದ ಕರ್ನಾಟಕ ಸರ್ಕಾರ ಮೀನುಗಾರಿಕೆ ಇಲಾಖೆ ಮತ್ತು ಫ್ರೀಡಂ ಆ್ಯಪ್ ಸಹಯೋಗದಲ್ಲಿ ಬಳನಾಡು ಮೀನು ಉತ್ಪಾದಕರ ಸಮಾವೇಶ 2022 ಇದೇ ಅಕ್ಟೋಬರ್ 16ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್, ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲನೆ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ಎಂ ರಾಜೀವ್ ಚಂದ್ರಶೇಖರ್, ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸರಣ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾದ ಡಾ.ಎಲ್ ಮುರುಗನ್ ಉಪಸ್ಧಿತರಿರಲಿದ್ದಾರೆ. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಘನ ಉಪಸ್ಧಿತರಿರಲಿದ್ದಾರೆ. ಸಚಿವರಾದ ಡಾ.ಸಿ.ಎನ್ ಅಶ್ವತ್ಧ ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನು ಹಲವರು ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು