Monday, January 20, 2025
ಸುದ್ದಿ

ಪ್ರಮೋದ್ ಮಧ್ವರಾಜ್ ಅವರ ಜನ್ಮದಿನ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ – ಶಾಸಕ ರಘುಪತಿ ಭಟ್ ಉದ್ಘಾಟನೆ –ಕಹಳೆ ನ್ಯೂಸ್

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಜನ್ಮದಿನ ಪ್ರಯುಕ್ತ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ ಮಲ್ಪೆ ಕೊಳ ಫ್ರೆಂಡ್ಸ್ ಮಲ್ಪೆ ರಕ್ತನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಇಂದು ಕೆ.ಎಂ.ಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಆಯೋಜಿಸಲಾದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದ ಉದ್ಘಾಟನೆಯನ್ನು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿ ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಮೆಡಿಕಲ್ ಸೂಪರ್ ಡೆಂಟ್ ಡಾll. ಅವಿನಾಶ್ ಶೆಟ್ಟಿ, ರಕ್ತ ನಿಧಿ ವಿಭಾಗದ ಮುಖ್ಯಸ್ಥ ಡಾll. ಶಮಿ ಶಾಸ್ತ್ರಿ, ರಕ್ತದ ಆಪದ್ಬಾಂಧವ ಸತೀಶ್ ಸಾಲ್ಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.