ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ವಿರುದ್ದ ರಾತ್ರೋರಾತ್ರಿ ನೋಟಿಸ್ ಜಾರಿಗೊಳಿಸಿರುವುದನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳಿAದ ಇಂದು ಪ್ರತಿಭಟನೆ ನಡೆಯಿತು.
ನಗರದ ಮಿನಿ ವಿಧಾನ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಹೋರಾಟಗಾರರಿಗೆ ನೋಟಿಸ್ ನೀಡಿದ ಕ್ರಮವನ್ನು ಖಂಡಿಸಲಾಯಿತು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ‘ಜನಪರ ಹೋರಾಟದ ಮುಂದೆ ಯಾವುದೇ ಶಕ್ತಿ ನಿಲ್ಲುವುದಿಲ್ಲ ಯಾವುದೇ ರೀತಿಯಲ್ಲಿ ಹೋರಾಟ ಹತ್ತಿಕ್ಕುವ ಪ್ರಯತ್ನವನ್ನು ನಡೆಸಿದರೂ ನಾಳಿನ ಹೋರಾಟ ನಡೆಯಲಿದೆ. ಪಕ್ಷದಿಂದ ಸಂಪೂರ್ಣ ಬೆಂಬಲವಿದೆ’ ಎಂದು ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಹೇಳಿದರು.
ಹಿರಿಯ ದಲಿತ ಮುಖಂಡರಾದ ಎಂ.ದೇವದಾಸ್ ಮಾತಾನಾಡಿ ಹೋರಾಟಗಾರರ ಮನೆಗೆ ರಾತ್ರಿ ವೇಳೆ ಅದರಲ್ಲೂ ಮಹಿಳಾ ಹೋರಾಟಗಾರರ ಮನೆಗೆ ಪೋಲಿಸರು ನೋಟಿಸ್ ಜೊತೆಗೆ ಬೇಟಿ ನೀಡಿ ಬೆದರಿಕೆ ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದರು.