Recent Posts

Sunday, January 19, 2025
ಸುದ್ದಿ

ಜುಲೈ 19 ರಂದು ಗ್ರಾಮೀಣ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ದೃಷ್ಟಿಯಿಂದ “ವಿವೇಕ ಉದ್ಯೋಗ ಮೇಳ” – ಕಹಳೆ ನ್ಯೂಸ್

ಪುತ್ತೂರು:ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ “ವಿವೇಕ ಉದ್ಯೋಗ ಮೇಳ”.
ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರವರ್ತನೆಯಲ್ಲಿ ಜು. 19ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ವಿವೇಕ ಉದ್ಯೋಗ ಮೇಳವನ್ನು ಸ್ಥಳೀಯ ಉದ್ಯೋಗಾಕಾಂಕ್ಷಿಗಳ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಆಸುಪಾಸಿನ ಯುವಕ ಯುವತಿಯರನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಉದ್ಯೋಗ ಮೇಳವನ್ನು ಸ್ಥಳೀಯ ಆದ್ಯತೆಯೊಂದಿಗೆ ಆಯೋಜಿಸಲಾಗಿದೆ. ಪುತ್ತೂರು ಮತ್ತು ಆಸುಪಾಸಿನ ತಾಲೂಕುಗಳಿಂದ ಒಂದು ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. 40ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಈಗಾಗಲೇ 60೦ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಆನ್ಲೈನ್ ಮೂಲಕ ನೋಂದಾಯಿಸಿದ್ದಾರೆ. ಜು. 19ರಂದು ಬೆಳಗ್ಗೆ 10ಕ್ಕೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ್ ಎಸ್. ಜವುಳಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ವಹಿಸಲಿದ್ದಾರೆ ಎಂದು ಕೃಷ್ಣ ಭಟ್ ವಿವರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಉದ್ಯೋಗ ಮೇಳದ ಸಂಚಾಲಕ ವಿವೇಕ್ರಂಜನ್ ಭಂಡಾರಿ, ವಿವೇಕಾನಂದ ಇಂಜಿನಿರಿಂಗ್ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪಿ. ಸತೀಶ್ ರಾವ್, ಉದ್ಯೋಗ ಮಾಹಿತಿ ಕೇಂದ್ರದ ನಿರ್ದೇಶಕ ನಿರೀಕ್ಷಿತ್, ವಿಶೇಷಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.