Monday, January 20, 2025
ಸುದ್ದಿ

ಉಡುಪಿಯಲ್ಲಿ ಕೋಲ್ ಸಾಗಾಟದ ಟ್ರಕ್‌ನಲ್ಲಿ ಬೆಂಕಿ; ತಪ್ಪಿದ ಅನಾಹುತ– ಕಹಳೆ ನ್ಯೂಸ್

ಕಾಪು : ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ ಮಾಡುತ್ತಿದ್ದ ಟ್ರಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ‌ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಟ್ರಕ್‌ನಲ್ಲಿ ತುಂಬಿದ್ದ ಕೋಲ್‌ನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು. ಕೂಡಲೇ ಚಾಲಕ ಮತ್ತು ನಿರ್ವಾಹಕ ಸ್ಥಳೀಯರ ಜತೆಗೂಡಿ ಬೆಂಕಿಯ ಕೆನ್ನಾಲಗೆಯನ್ನು ನಂದಿಸುವ ಪ್ರಯತ್ನ ಮಾಡಿದ್ದರು.

ಅಷ್ಟರಲ್ಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಟ್ರಕ್‌ನ ಮೇಲೇರಿ ಹೊಗೆಯನ್ನು ಸಂಪೂರ್ಣವಾಗಿ ನಂದಿಸುವ ಮೂಲಕ ಮುಂದೆ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ.