Friday, September 20, 2024
ಸುದ್ದಿ

ಉಪ್ಪಿನಂಗಡಿ-ಕಡಬ ಪ್ರತೀ ೧೫ ನಿಮಿಷಗಳಿಗೊಮ್ಮೆ ‘ಇಂಟರ್ಸಿಟಿ’ ಬಸ್ಸುಗಳ ಓಡಾಟ ಆರಂಭಿಸಿ ; ಅಧಿಕಾರಿಗಳಿಗೆ ಆದೇಶ ಹೊರಡಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಪ್ರಯಾಣಿಕರ ಗರಿಷ್ಠ ಪ್ರಮಾಣದ ಒತ್ತಡವಿರುವ ಉಪ್ಪಿನಂಗಡಿ-ಕಡಬ ನಡುವೆ ಕೆಎಸ್ಸಾರ್ಟಿಸಿಯಿಂದ ಪ್ರತೀ ೧೫ ನಿಮಿಷಗಳಿಗೊಮ್ಮೆ ‘ಇಂಟರ್ಸಿಟಿ’ ಬಸ್ಸುಗಳ ಓಡಾಟ ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪುತ್ತೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ಈ ಭಾಗದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳ ಓಡಾಟಕ್ಕೆ ಮಾತ್ರ ಅವಕಾಶವಿದ್ದು, ಬೇರೆ ಸಾರಿಗೆ ವ್ಯವಸ್ಥೆಗೆ ಅವಕಾಶವಿಲ್ಲದ ಕಾರಣ ಪುತ್ತೂರು ತಾಲ್ಲೂಕಿನ 68ಗ್ರಾಮಗಳಿಗೆ ಹೊಂದಿಕೊಂಡು ಕೆಎಸ್ಸಾರ್ಟಿಸಿ ಬಸ್ಸುಗಳ ಓಡಾಟ ವ್ಯವಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಸಾರ್ವಜನಿಕರಿಂದ ಬಂದ ಬಸ್ಸುಗಳ ಬೇಡಿಕೆಯ ಕುರಿತು ತ್ವರಿತ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.’ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭವಾನಿ ಚಿದಾನಂದ, ಉಪಾಧ್ಯಕ್ಷೆ ರಾಜೇಶ್ವರಿ, ಸುಳ್ಯ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಆಶಾ ತಿಮ್ಮಪ್ಪ ಗೌಡ, ಅನಿತಾ ಹೇಮನಾಥ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ,ಸದಸ್ಯರಾದ ರಾಧಾಕೃಷ್ಣ ಬೋರ್ಕರ್, ಮೀನಾಕ್ಷಿ ಮಂಜುನಾಥ ಹಾಜರಿದ್ದರು.