Sunday, January 19, 2025
ಸುದ್ದಿ

ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ : ಚಪ್ಪರ ಮುಹೂರ್ತ : ನಾಗನಕಟ್ಟೆಯ ಪುನರ್ ನಿರ್ಮಾಣಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ಡಿಸೆಂಬರ್ 20ರಿಂದ 25ರವರೆಗೆ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ ನಡೆದಿದೆ. ಬೆಳಿಗ್ಗೆ ಶ್ರೀ ಮಹಾವಿಷ್ಣು ದೇವರಿಗೆ ಪೂಜೆ ನಡೆದ ಬಳಿಕ ಚಪ್ಪರ ಮುಹೂರ್ತ ನೆರವೇರಿದೆ. ಇದೇ ಸಂದರ್ಭದಲ್ಲಿ ವಾಸ್ತುಶಿಲ್ಪಿ ಎಸ್.ಎಂ. ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ ನಾಗನಕಟ್ಟೆಯ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಯು.ಜಿ.ರಾಧಾ, ಅರ್ಚಕ ನಾಗರಾಜ ಭಟ್ ಕುಕ್ಕಿಲ ಹಾಗೂ ಹಲವರು ಉಪಸ್ಧಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು