Recent Posts

Sunday, January 19, 2025
ಸುದ್ದಿ

Breaking News : ಶಿರೂರು ಶ್ರೀ ಅನುಮಾನಾಸ್ಪದ ಸಾವು ; ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ, ಜು 19: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಸ್ಪಾದ ಸಾವಿನ ಹಿನ್ನಲೆಯಲ್ಲಿ, ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ವಾಮೀಜಿಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಶ್ರೀಗಳ ಪೂರ್ವಶ್ರಮದ ಸಹೋದರ ಲಾತವ್ಯ ಆಚಾರ್ಯ ಅವರು ಹಿರಿಯಡ್ಕ ಪೊಲೀಸ್ ಠಾಣೆಗೆ ಜು .19 ರ ಗುರುವಾರ ದೂರು ನೀಡಿದ್ದಾರೆ.

ಶಿರೂರು ಶ್ರೀಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮಕೈಗೊಳ್ಳುವಂತೆ ಲಾತವ್ಯ ಆಚಾರ್ಯ ದೂರು ಸಲ್ಲಿದ್ದಾರೆ. ಲಾತವ್ಯ ಆಚಾರ್ಯ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ಹಿರಿಯಡ್ಕ ಪೊಲೀಸರು ತಿಳಿಸಿದ್ದಾರೆ. ಜು17 ರ  ಮಂಗಳವಾರ ಶಿರೂರಿನಲ್ಲಿ ನಡೆದಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿದ್ದ ಮಕ್ಕಳ ಜತೆ ಆಹಾರವನ್ನು ಸೇವಿಸದ್ದರು. ಆದರೆ ಶ್ರೀಗಳ ಆಹಾರದಲ್ಲಿ ವ್ಯತ್ಯಯವಾಗಿ ವಾಂತಿಬೇಧಿ ಸಹಿತ ಉದರ ಸಂಬಂಧಿ ಸಮಸ್ಯೆ ತಲೆದೋರಿ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು