ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ್ದಾರೆ.
ಬಳಿಕ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017 ಆಕ್ಟೋಬರ್ 12 ರಂದು ರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಅಗಿದ್ದರು.
ಕಳೆದ ಐದು ವರ್ಷಗಳಿಂದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡಿದ್ದು ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.