Sunday, January 19, 2025
ಸುದ್ದಿ

ಬಿಜೆಪಿಗೆ ಬೆಂಬಲ ಕುರಿತ ಗೊಂದಲಗಳಿಗೆ ತೆರೆ ಎಳೆದ ಶಿವಸೇನೆ – ಕಹಳೆ ನ್ಯೂಸ್

ತೆಲುಗು ದೇಶಂ ಪಾರ್ಟಿ, ಎನ್.ಡಿ.ಎ. ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ನಾಳೆ ನಡೆಯಲಿದ್ದು, ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿರುವ ಮಿತ್ರ ಪಕ್ಷ ಶಿವಸೇನೆ, ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬ ಗೊಂದಲಕ್ಕೆ ಈಗ ತೆರೆ ಬಿದ್ದಿದೆ.

ಶಿವಸೇನೆ ತನ್ನ ಪಕ್ಷದ ಸಂಸದರಿಗೆ ನಾಳಿನ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆಯಲ್ಲದೆ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಸರ್ಕಾರದ ಪರ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದಾಗಿ ಎನ್.ಡಿ.ಎ. ಸರ್ಕಾರ, ಅವಿಶ್ವಾಸ ನಿರ್ಣಯದಲ್ಲಿ ಸುಲಭವಾಗಿ ಗೆಲುವು ಸಾಧಿಸುವ ನಿರೀಕ್ಷೆಯಿದ್ದು, ಅದರಲ್ಲೂ ಕಳೆದ ಕೆಲ ದಿನಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಸದಾ ಟೀಕಾಪ್ರಹಾರ ನಡೆಸುತ್ತಿದ್ದ ಶಿವಸೇನೆ, ಕಷ್ಟಕಾಲದಲ್ಲಿ ನೆರವಿಗೆ ನಿಂತಿರುವುದು ಬಿಜೆಪಿ ಪಾಳೆಯದಲ್ಲಿ ಹರ್ಷ ಮೂಡಿಸಿದೆ.