Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಣಿಯೂರು ಸಮೀಪದ ದೋಳ್ಪಾಡಿಯಲ್ಲಿ ಕಂಬಳಿ ಮಾರುವ ನೆಪದಲ್ಲಿ ಬಂದು ಮಹಿಳೆ ಅತ್ಯಾಚಾರಕ್ಕೆ ಯತ್ನಿಸಿದ ರಫೀಕ್ ಹಾಗೂ ರಮಿಯಾಸುದ್ದಿನ್ : ಪರಾರಿಯಾಗುವಾಗ ಜಿಹಾದಿಗಳ ಕಾರು ಪಲ್ಟಿ – ಕಹಳೆ ನ್ಯೂಸ್


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಂಬಳಿ ಮಾರುವ ಸೋಗಿನಲ್ಲಿ ಬಂದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿ, ಬಳಿಕ ಪರಾರಿಯಾಗುವಾಗ ವಾಹನ ಅಪಘಾತಕ್ಕೀಡಾಗಿದೆ. ಗಾಯಗೊಂಡ ಇಬ್ಬರೂ ಕೂಡ ಆಸ್ಪತ್ರೆ ಪಾಲಾಗಿದ್ದಾರೆ.

ಕಡಬ(ದಕ್ಷಿಣ ಕನ್ನಡ): ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ.

ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡಿರುವ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಸ್ಥರ ಮಾಹಿತಿ ಪ್ರಕಾರ, ಮನೆ ಮನೆಗೆ ಬಟ್ಟೆ ಮಾರುವುದಾಗಿ ಹೇಳಿಕೊಂಡು ಆರೋಪಿಗಳು ಕಾಣಿಯೂರಿಗೆ ಬಂದಿದ್ದಾರೆ. ಅಲ್ಲಿಂದ ಹಲವು ಮನೆಗಳಿಗೆ ಅವರು ತೆರಳಿದ್ದು, ಬಳಿಕ ದೋಳ್ಪಾಡಿ ಗ್ರಾಮಕ್ಕೂ ಬಂದಿದ್ದರು. ಅಲ್ಲಿ ಅವರು ಬಟ್ಟೆ ಮಾರುವ ನೆಪದಲ್ಲಿ ಮನೆಯೊಂದಕ್ಕೆ ತೆರಳಿದ್ದು, ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ್ದಾರೆ. ಅದಾದ ಬಳಿಕ ಓರ್ವ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು ಕೂಡಲೇ ಜಿಹಾದಿಗಳು ತಾವು ಬಂದಿದ್ದ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಮಹಿಳೆ ಕಿರುಚಿದ ಸದ್ದು ಕೇಳಿದ ಸ್ಥಳೀಯರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ, ಆರೋಪಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಕಾರು ಪಲ್ಟಿಯಾಗಿ ಅವಘಡ ಸಂಭವಿಸಿದೆ.