Monday, January 20, 2025
ಸುದ್ದಿ

ಕುಟುಂಬ ಸಮೇತರಾಗಿ ಕಾಂತಾರ ಚಿತ್ರ ವೀಕ್ಷಣೆ ಮಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ : ನಟ ಚೇತನ್ ಹೇಳಿಕೆಗೆ ಖಾವಂದರು ಏನ್ ಹೇಳಿದ್ರು ಗೊತ್ತಾ..? – ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಕುಟುಂಬ ಸಮೇತರಾಗಿ ಮಂಗಳೂರಿನಲ್ಲಿ ಕಾಂತಾರ ಚಿತ್ರ ವೀಕ್ಷಣೆ ಮಾಡಿದ್ದಾರೆ. ಕಾಂತಾರಾ ಚಿತ್ರ ವೀಕ್ಷಿಸಿದ ಬಳಿಕ ಹೆಗ್ಗಡೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಖಾವಂದರು ಇತ್ತೀಚಿನ ದಿನಗಳಲ್ಲಿ ಸಿನಿಮಾ ನೋಡದೆ ಬಹಳ ದಿನವಾಗಿತ್ತು. ಕಾಂತಾರಾ ಚಿತ್ರ ನೋಡಿ ಬಹಳ ಸಂತೋಷವಾಗಿದೆ. ಕಾಂತಾರದಲ್ಲಿ ದೈವಾರಾಧನೆಯನ್ನು ಬಹಳ ಚೆನ್ನಾಗಿ ರಿಷಬ್ ಶೆಟ್ಟಿ ತೋರಿಸಿದ್ದಾರೆ. ಚಿತ್ರದಲ್ಲಿ ಯುವಕರಿಗೆ ಹೊಸ ಕಥೆ, ಹಳೆಯ ಸ್ಮರಣೆ ಆಗುತ್ತದೆ. ಈ ಚಿತ್ರದಲ್ಲಿ ಹೊಸ ದೃಷ್ಠಿಕೋನವಿದ್ದು, ಜಾತಿ ಮತ ಬೇಧ ಮರೆತು ಸಹಬಾಳ್ವೆ ಮಾಡಬೇಕೆಂಬ ಸಂದೇಶ ಈ ಚಿತ್ರದಲ್ಲಿ ಇದೆ. ಚಿತ್ರ ನೋಡಿದ ಬಳಿಕ ಮೂಡ್‍ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲಾ ಕಲಾವಿದರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಬೆಳೆಯುತ್ತಿರುವ ತಂತ್ರಜ್ಞಾನವನ್ನು ರಿಷಬ್ ಶೆಟ್ಟಿ ಹೇಗೆ ಬಳಸಿದ್ದಾರೆ ಅನ್ನೋದು ಚಿತ್ರದಲ್ಲಿ ನೋಡಿದ್ದೇನೆ. ಕಲಾವಿದರು, ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ದೈವಾರಾಧನೆ ಬಗ್ಗೆ ನಟ ಚೇತನ್ ಹೇಳಿಕೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ದೈವಾರಾಧನೆ ಹಿಂದೂ ಧರ್ಮದ ಭಾಗ ಹೌದಾ ಅಲ್ವಾ ಅನ್ನೋದು ಗೊತ್ತಿಲ್ಲ. ಆದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ ಸ್ವಭಾವವನ್ನು ಅರಿಯದೆ ಮಾತನಾಡಿದರೆ ಬೇರೆಯಾಗುತ್ತದೆ. ಧರ್ಮದ ಮೂಲ ಹುಡುಕುತ್ತಾ ಹೋದರೆ ಎಲ್ಲಿಯೂ ಸಿಗೋದಿಲ್ಲ. ನಂಬಿಕೆ ಆಚರಣೆ ನಡವಳಿಕೆ ಸ್ವಭಾವಿಕವಾಗಿ ಬೆಳೆದು ಬಂದಿದೆ. ಇದನ್ನು ನಾವು ಬಿಟ್ಟಿರೋಕೆ ಸಾಧ್ಯವೇ ಇಲ್ಲ. ಅವರು ಹಿಂದೂ ಧರ್ಮದ ಯಾವ ಸೂಕ್ಷ್ಮತೆಯನ್ನು ಹೋಗಿ ನೋಡಿದ್ದಾರೆ ಅನ್ನೋದು ಗೊತ್ತಿಲ್ಲ. ದೈವಾರಾಧನೆಗೆ ಎರಡು ಜಿಲ್ಲೆಯಲ್ಲಿ ವ್ಯಾಪಾಕವಾದ ನಂಬಿಕೆಯಿದೆ. ಇವತ್ತೂ ದೈವಾರಾಧನೆ ಮಾಡುತ್ತೇವೆ, ದೈವದ ನುಡಿಗೆ ಗೌರವ ಕೊಡುತ್ತೇವೆ, ದೈವ ಮೈಮೇಲೆ ಬಂದಾಗ ಮಾತಿಗೆ ಗೌರವ ಕೊಡುತ್ತೇವೆ. ಇದನ್ನು ಧರ್ಮಕ್ಕೆ, ಸೂಕ್ಷ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವೇ ಇಲ್ಲ ಎಂದಿದ್ದಾರೆ.