Friday, November 22, 2024
ಸುದ್ದಿ

Breaking News : ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರೂ ಪ್ರವೇಶಿಸಬಹುದು ; ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್‌ – ಕಹಳೆ ನ್ಯೂಸ್

ಹೊಸದಿಲ್ಲಿ, ಜು20: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಬೇಕು. ದೇಗುಲದಲ್ಲಿ ಪೂಜೆ ಮಾಡಲು ಪುರುಷರಿಗೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ಮಹಿಳೆಯರಿಗೂ ಇದೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶ ನಿರ್ಬಂಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ| ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳುಳ್ಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪನ್ನು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲೆಲ್ಲಿ ಪುರುಷರು ಹೋಗಬಹುದೋ ಅಲ್ಲಿಗೆ ಮಹಿಳೆಯರೂ ತೆರಳಬಹುದು. ಪುರುಷರಿಗೆ ಅನ್ವಯಿಸುವ ಸಂಗತಿಗಳೆಲ್ಲವೂ ಮಹಿಳೆಯರಿಗೂ ಅನ್ವಯಿಸುತ್ತವೆ. ದೇಗುಲಕ್ಕೆ ಪ್ರವೇಶಿಸುವುದು ಶಾಸನವನ್ನು ಆಧರಿಸಿಲ್ಲ. ಇದು ಸಾಂವಿಧಾನಿಕ ಹಕ್ಕು. ಇದಕ್ಕೆ ಸಂಬಂಧಿಸಿದಂತೆ ಸಂವಿಧಾನದ 25 ಹಾಗೂ 26ನೇ ಕಲಂನಲ್ಲಿ ವಿವರಿಸಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಅಯ್ಯಪ್ಪ ಸ್ವಾಮಿ ದೇಗುಲದ ಆಡಳಿತ ವಹಿಸಿರುವ ತಿರುವಾರುಕೂರು ದೇವಸ್ವಂ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ, ಯಾವ ಆಧಾರದ ಮೇಲೆ ನಿಷೇಧ ಹೇರಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸುವಾಗ ಪುರುಷರಿಗಷ್ಟೇ ಸಮಾನತೆ ಮಹಿಳೆಯರಿಗೂ ಇರುತ್ತದೆ. ಈ ಅವಕಾಶವನ್ನು ತಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ಮಹಿಳೆಯರ ಋತುಸ್ರಾವದ ಕಾಲಘಟ್ಟ ಎಂದು 10ರಿಂದ 50 ವರ್ಷವರೆಗೆ ಮಹಿಳೆಯರಿಗೆ ನಿರ್ಬಂಧಿಸಲಾಗಿದೆ ಎಂಬ ಅಮಿಕಸ್ ಕ್ಯೂರಿ ಅಭಿಪ್ರಾಯಕ್ಕೆ ಸುಪ್ರೀಂಕೋರ್ಟ್, ಹೆಣ್ಣು ಮಕ್ಕಳಿಗೆ 10 ವರ್ಷಕ್ಕೂ ಮೊದಲೇ ಋತುಸ್ರಾವ ಆರಂಭವಾಗಬಹುದು. 50 ವರ್ಷದ ನಂತರವೂ ಅದು ಮುಂದುವರೆಯಬಹುದು. ದೇವಸ್ಥಾನ ಎನ್ನುವುದು ಯಾವತ್ತೂ ಖಾಸಗೀ ಸ್ವತ್ತಲ್ಲ. ಅದು ಸಾರ್ವಜನಿಕ ಆಸ್ತಿ. ಅಲ್ಲಿಗೆ ಯಾರು ಬೇಕಾದರೂ ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.